ಸಿಂದಗಿಯಲ್ಲಿ ವ್ಯಕ್ತಿ ಆತ್ಮಹತ್ಯೆ!

781

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ.

ಮೃತ ಬಸವರಾಜ ನಾಯ್ಕಲ

ಕಚೇರಿ ಆವರಣದಲ್ಲಿನ ಮರವೊಂದಕ್ಕೆ ನೇಣು ಹಾಕಿಕೊಂಡಿದ್ದಾರೆ. ಬಸವರಾಜ ನಾಯ್ಕಲ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಕೋರವಾರ ಗ್ರಾಮದ ಬಸವರಾಜ ನಾಯ್ಕಲ ಸಾಸಾಬಾಳದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದರು. ಪಟ್ಟಣದಲ್ಲಿ ವಾಸ ಆಗಿದ್ದರು. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆದಿದೆ.


TAG


Leave a Reply

Your email address will not be published. Required fields are marked *

error: Content is protected !!