ಭಾನುವಾರ ನೀಟ್ ಪರೀಕ್ಷೆ: ಕಟ್ಟುನಿಟ್ಟಿನ ಕ್ರಮ

259

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ನೀಟ್ ಪರೀಕ್ಷೆ ನಡೆಯಲಿದೆ. ಕರೋನಾ ಮುನ್ನೆಚ್ಚರಿಕೆ ನಡುವೆ 15 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲಿದ್ದಾರೆ. ಹೀಗಾಗಿ ಎಲ್ಲ ರೀತಿ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಪ್ರತಿ ರೂಮಿನ ಸಂಖ್ಯೆಯನ್ನ 24 ರಿಂದ 12ಕ್ಕೆ ಇಳಿಕೆ ಮಾಡಲಾಗಿದೆ. ಇದ್ರಿಂದಾಗಿ 2,546 ಕೇಂದ್ರಗಳ ಬದಲು 3,843 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗ್ತಿದೆ.

ಒಟ್ಟು 15.97 ಲಕ್ಷ ವಿದ್ಯಾರ್ಥಿಗಳು ವೈದ್ಯಕೀಯ ಪ್ರವೇಶ ಪರೀಕ್ಷೆ ಬರೆಯಲಿದ್ದಾರೆ. ಕರೋನಾ ಲಾಕ್ ಡೌನ್ ಪೂರ್ವದಲ್ಲಿ ಮೇ 3ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ನಂತರ ಜುಲೈ 26ಕ್ಕೆ ಆಯ್ತು. ಕೊನೆಗೆ ಸೆಪ್ಟೆಂಬರ್ 13ಕ್ಕೆ ನಿಗದಿಯಾಗಿ, ಭಾನುವಾರ ಪರೀಕ್ಷೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!