ಬಿಎಂಟಿಸಿ ಡಿಪೋಗೆ ಸೂಪರ್ ಸ್ಟಾರ್ ರಜನಿ ಭೇಟಿ

242

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಜೈಲರ್ ಚಿತ್ರದ ಗೆಲುವಿನ ಖುಷಿಯಲ್ಲಿರುವ ಸೂಪರ್ ಸ್ಟಾರ್ ರಜನಿಕಾಂತ್, ಬಿಎಂಟಿಸಿ ಡಿಪೋಗೆ ಭೇಟಿ ನೀಡುವ ಮೂಲಕ ಎಲ್ಲರ ಅಚ್ಚರಿಗೆ ಕಾರಣರಾಗಿದ್ದಾರೆ. ಒಂದು ಕಾಲದಲ್ಲಿ ಬಿಎಂಟಿಸಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ನಟ ರಜನಿಕಾಂತ್ ಇಂದು ಭಾರತ ಮಾತ್ರವಲ್ಲ ವಿದೇಶದಲ್ಲೂ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಜಯನಗರದಲ್ಲಿರುವ ಬಿಎಂಟಿಸಿ ಡಿಪೋ 4ಕ್ಕೆ ಸ್ನೇಹಿತ ರಾಜ್ ಬಹದ್ದೂರ್ ಜೊತೆಗೆ ಬಂದು ಕೆಲ ಹೊತ್ತು ಅಲ್ಲಿನ ಸಿಬ್ಬಂದಿ ಜೊತೆಗೆ ಸಮಯ ಕಳೆದಿದ್ದಾರೆ. ಜೊತೆಗೆ ಅಲ್ಲಿನ ಹಳೆಯ ಸಿಬ್ಬಂದಿ ಜೊತೆಗೆ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಸಿಬ್ಬಂದಿ, ಅಭಿಮಾನಿಗಳ ಜೊತೆಗೆ ಸೆಲ್ಫಿಗೆ ಪೋಸ್ ಕೊಟ್ಟರು.

ತಮ್ಮ ಬದುಕಿನ ಹಳೆಯ ದಿನಗಳನ್ನು ಮೆಲುಕು ಹಾಕಲು ಇಲ್ಲಿಗೆ ಭೇಟಿ ನೀಡಿದ್ದಕ್ಕೆ ಎಲ್ಲರಿಗೂ ಖುಷಿಯಾಗಿದೆ. ನಾವು ಎಷ್ಟೇ ಎತ್ತರಕ್ಕೆ ಹೋದರೂ ನಮ್ಮ ಆರಂಭದ ದಿನಗಳನ್ನು ಮರೆಯಬಾರದು ಅನ್ನೋದಕ್ಕೆ ಸಾಕ್ಷಿ ಎನ್ನುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!