ನನ್ನ ಉತ್ತರಾಧಿಕಾರಿಯಾಗಿ ಬೊಬ್ಡೆ ನೇಮಿಸಿ!

446

ನವದೆಹಲಿ: ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶ ಎಸ್.ಎ ಬೊಬ್ಡೆ ಅವರನ್ನ ತಮ್ಮ ಉತ್ತರಾಧಿಕಾರಿಯಾಗಿ ನೇಮಿಸಿ ಎಂದು ಮುಖ್ಯ ನ್ಯಾಯಮೂರ್ತಿ ರಂಜನ ಗೊಗೊಯ್ ಕೇಂದ್ರ ಸರ್ಕಾರಕ್ಕೆ ಶಿಪಾರಸು ಮಾಡಿದ್ದಾರೆ.

ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಪತ್ರ ಬರೆದಿರುವ ಮುಖ್ಯ ನ್ಯಾಯಮೂರ್ತಿ ಗೊಗೊಯ್, ನ್ಯಾಯಾಧೀಶ ಬೊಬ್ಡೆ ಅವರನ್ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಮಾಡಬೇಕೆಂದು ಕೇಳಿದ್ದಾರೆ ಅಂತಾ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ನಿವೃತ್ತಿಗೂ ಮೊದ್ಲು ತಮ್ಮ ಉತ್ತರಾಧಿಕಾರಿಯನ್ನ ಸೂಚಿಸುವ ಸಂಪ್ರದಾಯವಿದೆ.

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಕಳೆದ ಅಕ್ಟೋಬರ್ 3ರಂದು ರಂಜನ ಗೊಗೊಯ್ ಅಧಿಕಾರ ಸ್ವೀಕರಿಸಿದ್ರು. ಮುಂದಿನ ತಿಂಗಳು ನವೆಂಬರ್ 17ರಂದು ನಿವೃತ್ತಿ ಹೊಂದಲಿದ್ದಾರೆ. ಹೀಗಾಗಿ ತಮ್ಮ ಉತ್ತರಾಧಿಕಾರಿ ಬಗ್ಗೆ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!