ಸುರಪುರ ಕಾಂಗ್ರೆಸ್ ಶಾಸಕ ನಿಧನ

87

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 20 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸುರಪುರ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡಿದ್ದರು. ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!