ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

227

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಗುಜರಾತಿನ ಸೂರತ್ ಕೋರ್ಟ್ ನಿಂದ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಧಾನಿ ಮೋದಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಈ ಶಿಕ್ಷೆ ವಿಧಿಸಲಾಗಿದೆ.

ಇನ್ನು 15 ಸಾವಿರ ಠೇವಣಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕರ್ನಾಟಕದ ಕೋಲಾರ ಲೋಕಸಭಾ ಕ್ಷೇತ್ರಕ್ಕೆ 2019ರಲ್ಲಿ ನಡೆದ ಚುನಾವಣೆ ಸಂದರ್ಭದಲ್ಲಿ ಏಪ್ರಿಲ್ 13ರಂದು ನಡೆದ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಯಾಕೆ ಎಲ್ಲ ಕಳ್ಳರು ಮೋದಿ ಅನ್ನೋ ಹೆಸರಿನವರು ಆಗಿರುತ್ತಾರೆ. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಎಂದು ಹೇಳಿದರು.

ಈ ಹೇಳಿಕೆ ವಿರುದ್ಧ ಗುಜರಾತ್ ಮಾಜಿ ಸಚಿವ, ಬಿಜೆಪಿ ಶಾಸಕ ಶಾಸಕ ಪುರ್ಣೇಶ್ ಮೋದಿ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಸೂರತ್ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.




Leave a Reply

Your email address will not be published. Required fields are marked *

error: Content is protected !!