ಮಂಗಳೂರಲ್ಲಿ ಮತ್ತೊಂದು ಹತ್ಯೆ: ಶಾಲಾ ಕಾಲೇಜುಗಳಿಗೆ ರಜೆ

278

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆಯ ಬೆನ್ನಲ್ಲೇ ಸುರತ್ಕಲ್ ಹತ್ತಿರ ಫಾಜಿಲ್ ಅನ್ನೋ ಯುವಕನನ್ನು ಗುರುವಾರ ಸಂಜೆ ಹತ್ಯೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸುರತ್ಕಲ್, ಪಣಂಬೂರು, ಬಜ್ಪೆ, ಮುಲ್ಕಿ ಸುತ್ತಮುತ್ತಲ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಬಳಿ ಮನವಿ ಮಾಡಿದ್ದರು. ಅದರಂತೆ ಡಿಸಿ ರಜೆ ಘೋಷಿಸಿದ್ದಾರೆ.

ಇನ್ನು ನಿಷೇಧಾಜ್ಞೆ ಹೇರಿರುವ ಹಿನ್ನೆಲೆಯಲ್ಲಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆ ಮಾಡಬೇಡಿ ಎಂದು ಮುಸ್ಲಿಂ ಮುಂಖಡರಿಗೆ ಹೇಳಿದ್ದು, ಮನೆಗಳಲ್ಲಿ, ನಿಷೇಧಾಜ್ಞೆ ಇಲ್ಲದ ಸ್ಥಳದಲ್ಲಿನ ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವಂತೆ ಸೂಚಿಸಲಾಗಿದೆ.

ಇನ್ನು ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಬರುವುದನ್ನು ನಂಬಬೇಡಿ. ಹತ್ಯೆಗೆ ಏನು ಕಾರಣ ಅನ್ನೋದು ಇನ್ನು ತಿಳಿದು ಬಂದಿಲ್ಲ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಎಸ್ಪಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!