ಹಲವು ದಾಖಲೆ ಬರೆದ ಸೂರ್ಯಕುಮಾರ್

135

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಆಸ್ಟ್ರೇಲಿಯಾ ವಿರುದ್ಧದ 3 ಟಿ-20 ಪಂದ್ಯಗಳ ಸರಣಿಯಲ್ಲಿ ಭಾರತ ಜಯ ಸಾಧಿಸಿದೆ. ಮೂರನೇ ಪಂದ್ಯದಲ್ಲಿ ಯುವ ಆಟಗಾರ ಸೂರ್ಯಕುಮಾರ್ ಭರ್ಜರಿಯಾಗಿ ಬ್ಯಾಟ್ ಬೀಸಿದ್ದು, ಹಲವು ದಾಖಲೆಗಳನ್ನು ಬರೆದಿದ್ದಾರೆ.

36 ಎಸೆತಗಳಲ್ಲಿ 5 ಸಿಕ್ಸರ್ ನೊಂದಿಗೆ 69 ರನ್ ಗಳಿಸಿದ್ದಾರೆ. 191.66 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ ಅಬ್ಬರಿಸಿರುವ ಸೂರ್ಯಕುಮಾರ್ ಯುವರಾಜ್ ಸಿಂಗ್ ದಾಖಲೆ ಸರಿಗಟ್ಟಿದ್ದಾರೆ. ಟಿ-20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲೇ 5 ಸಿಕ್ಸ್ ಬಾರಿಸುವುದರೊಂದಿಗೆ ಒಂದೇ ವರ್ಷದಲ್ಲಿ 42 ಸಿಕ್ಸ್ ಬಾರಿಸಿದ್ದಾರೆ.

ಪಾಕಿಸ್ತಾನದ ಮೊಹಮ್ಮದ್ ರಿಜ್ವನ್ ದಾಖಲೆ ಸರಿಗಟ್ಟಿದ್ದಾರೆ. ಈ ವರ್ಷ ನಾಲ್ಕಕ್ಕೂ ಹೆಚ್ಚು ಬಾರಿ 50 ಪ್ಲಸ್ ರನ್ ಗಳಿಸಿದ್ದಾರೆ. 2009ರಲ್ಲಿ ಯವರಾಜ್ ಸಿಂಗ್ 3 ಕ್ಕೂ ಹೆಚ್ಚು 50 ಪ್ಲಸ್ ರನ್ ಗಳಿಸಿದ್ದರು. ಇನ್ನು ಸ್ಟ್ರೈಕ್ ರೇಟ್ ವಿಚಾರದಲ್ಲಿ ಸೂರ್ಯಕುಮಾರ್ ಯಾದವ್ ದಾಖಲೆ ನಿರ್ಮಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!