ಸುಷ್ಮಾ ಅಂತಿಮ ದರ್ಶನಕ್ಕೆ ಬಿಜೆಪಿ ಕಚೇರಿಯಲ್ಲಿವ್ಯವಸ್ಥೆ

425

ನವದೆಹಲಿ: ಬಿಜೆಪಿ ನಾಯಕಿ, ದೆಹಲಿ ಮಾಜಿ ಸಿಎಂ, ಕೇಂದ್ರ ಮಾಜಿ ಸಚಿವೆ ಸುಷ್ಮಾ ಸ್ವಾರಜ್ ಅವರ ಅಂತ್ಯಕ್ರಿಯೆ ಇಂದು ಸಂಜೆ ನಡೆಯಲಿದೆ ಅಂತಾ ಅವರ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

ಗಣ್ಯ ವ್ಯಕ್ತಿಗಳು ಸ್ವರಾಜ್ ಅವರ ಅಂತಿಮ ದರ್ಶನ ಪಡೆಯಲು ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದದ್ದು, ರಾಷ್ಟ್ರೀಯ ನಾಯಕರು ಸೇರಿದಂತೆ ರಾಜ್ಯ ನಾಯಕರುಗಳು ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ವಿಶ್ವದ ಅನೇಕ ನಾಯಕರು ಸಂತಾಪ ಸೂಚಿಸಿದ್ದಾರೆ.

ಇನ್ನು ಬೆಳಗ್ಗೆ 11ಗಂಟೆಗೆ ಬಿಜೆಪಿ ಕಚೇರಿಗೆ ಅವರ ಪಾರ್ಥಿವ ಶರೀರ ತರಲಾಗುವುದು. ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಗೆ, ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಸುಮಾರು 3 ಗಂಟೆಗೂ ಹೆಚ್ಚು ಕಾಲ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಸಿಲಾಗುತ್ತೆ. ಬಳಿಕ ಮೆರವಣಿಗೆ ಮೂಲಕ ಚಿತಾಗಾರಕ್ಕೆ ತೆಗೆದುಕೊಂಡು ಹೋಗಲಾಗುವುದು ಅಂತಾ ಅವರ ಕುಟುಂಬಸ್ಥರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!