ಪ್ರಜಾಸ್ತ್ರ ಸುದ್ದಿ
ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಶಂಕಿತ ಉಗ್ರನನ್ನು ಎನ್ಐಎ(ರಾಷ್ಟ್ರೀಯ ತನಿಖಾ ದಳ) ಸೋಮವಾರ ಬಂಧಿಸಿದೆ. ಶಹನವಾಜ್ ಅಲಿಯಾಸ್ ಶಫಿ ಉಝಾಮಾ ಬಂಧಿತ ಶಂಕಿತ ಉಗ್ರನಾಗಿದ್ದಾನೆ.
ದೆಹಲಿ ಮೂಲದ ಶಹನವಾಜ್ ಎಂಜಿನಿಯರ್ ಆಗಿದ್ದಾನೆ. ಮೊದಲು ಪುಣೆಯಲ್ಲಿ ಬಂಧಿಸಲಾಗಿತ್ತು. ನಂತರ ಆತ ಎಸ್ಕೇಪ್ ಆಗಿದ್ದ. ಅಲ್ಲಿಂದ ದೆಹಲಿಗೆ ಬಂದು ತಲೆ ಮರೆಸಿಕೊಂಡಿದ್ದ. ಇದೀಗ ಆತನನ್ನು ಬಂಧಿಸಲಾಗಿದೆ.