ಸಂಸದರ ಅಮಾನತು: ಇಂಡಿಯಾ ಪ್ರತಿಭಟನೆ

200

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಲೋಕಸಭೆಯಲ್ಲಿ ಭದ್ರತೆ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮಾತನಾಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿವೆ. ಈ ವೇಳೆ ಅಶಿಸ್ತಿನಿಂದ ನಡೆದುಕೊಂಡಿದ್ದಾರೆ ಎಂದು ಹಂತ ಹಂತವಾಗಿ 143 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ಸಂಸತ್ ಭವನದಿಂದ ವಿಜಯ್ ಚೌಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ಈ ವೇಳೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆಯಲ್ಲಿ ಭದ್ರತಾ ಉಲ್ಲಂಘನೆ ಬಗ್ಗೆ ಸಂಸತ್ತಿನಲ್ಲಿ ಮಾತನಾಡಲು ಪ್ರಧಾನಿ, ಗೃಹ ಸಚಿವರು ಹಿಂದೇಟು ಹಾಕುತ್ತಿದ್ದಾರೆ. ಹೊರಗೆ ಎಲ್ಲಿಯೋ ಮಾತನಾಡುತ್ತಾರೆ. ಈ ಕುರಿತು ಸಂಪೂರ್ಣ ಮಾಹಿತಿ ನೀಡಬೇಕು ಎಂದರು.

ಇನ್ನು ಶುಕ್ರವಾರ ಜಂತರ್ ಮಂತರ್ ಮುಂದೆ ಇಂಡಿಯಾ ಮೈತ್ರಿಕೂಟ ಪ್ರತಿಭಟನೆ ನಡೆಸಲು ಸಜ್ಜಾಗಿದೆ. ಜೊತೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ಕೊಡಲಾಗಿದೆ.




Leave a Reply

Your email address will not be published. Required fields are marked *

error: Content is protected !!