ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

406

ಮೈಸೂರು: ಗೃಹಿಣಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.

ಸೌಮ್ಯಾ ಅನ್ನೋ ಗೃಹಿಣಿ ಪತಿಯ ಮನೆಯಲ್ಲಿಯೇ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯಷ್ಟೇ ಇವರ ಮದುವೆಯಾಗಿತ್ತು. ನೇಣುಬಿಗಿದ ಸ್ಥಿತಿಯಲ್ಲಿ ಸೌಮ್ಯಾ ಮೃತದೇಹ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಪತಿ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.

ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!