ತಳವಾರ-ಪರಿವಾರ ಎಸ್ಟಿ ಅಧಿಸೂಚನೆ ಹೊರಡಿಸಿ: ಸಿದ್ದು, ಸಿಂಹ ಒತ್ತಾಯ

1191

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿರುವ ತಳವಾರ ಹಾಗೂ ಪರಿವಾರ ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಕೇಂದ್ರ ಸರ್ಕಾರ, ಮಾರ್ಚ್ 19, 2020ರಂದು ರಾಜ್ಯಪತ್ರ ಹೊರಡಿಸಿದೆ. ಆದ್ರೆ, ರಾಜ್ಯ ಸರ್ಕಾರ ವಿಳಂಬ ಮಾಡ್ತಿದ್ದು, ಶೈಕ್ಷಣಿಕ ವರ್ಷ ಆರಂಭವಾಗ್ತಿದೆ. ಹೀಗಾಗಿ ಕೂಡಲೇ ರಾಜ್ಯಪತ್ರ ಹೊರಡಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಸಂಬಂಧ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ, ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ರಾಜ್ಯಪತ್ರ ಹೊರಡಿಸಿ 2 ತಿಂಗಳಾಗಿದೆ. ಶೈಕ್ಷಣಿಕ ವರ್ಷ ಶುರುವಾಗ್ತಿದೆ. ಪ್ರಾಧಿಕಾರಗಳು ವಿವಿಧ ಇಲಾಖೆಗಳಲ್ಲಿ ನೇಮಕಾತಿಗಳಿಗೆ ಅಧಿಸೂಚನೆ ಹೊರಡಿಸಿವೆ. ಕೆಲವು ಹೊರಡಿಸ್ತಿವೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ತಳವಾರ ಹಾಗೂ ಪರಿವಾರ ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಿ ಅಧಿಸೂಚನೆ ಹೊರಡಿಸಬೇಕು . ಎಲ್ಲ ಇಲಾಖೆ ಹಾಗೂ ಜಿಲ್ಲಾಡಳಿತಗಳು ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ನಿರ್ದೇಶನ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇನ್ನು ಕೊಡಗು-ಮೈಸೂರು ಸಂಸದ ಪ್ರತಾಪ ಸಿಂಹ ಸಹ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ತಳವಾರ, ಪರಿವಾರ ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಯತ್ನದಲ್ಲಿ ಸಂಸದ ಪ್ರತಾಪ ಸಿಂಹ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ತನ್ನ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರ ಕೂಡಲೇ ಈ ಕುರಿತು ಅಧಿಸೂಚನೆ ಹೊರಡಿಸಬೇಕೆಂದು ಒತ್ತಾಯಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!