ತಮಿಳು ಖ್ಯಾತ ಹಾಸ್ಯ ನಟ ವಿವೇಕ ನಿಧನ

297

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ತಮಿಳು ಸಿನಿ ದುನಿಯಾದ ಖ್ಯಾತ ಹಾಸ್ಯ ನಟ ವಿವೇಕ(59) ಶನಿವಾರ ಬೆಳಗಿನ ಜಾವ ಸುಮಾರು 4.35ರ ಸುಮಾರಿಗೆ ನಿಧನರಾಗಿದ್ದಾರೆ. ಏಪ್ರಿಲ್ 16, ಶುಕ್ರವಾರ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ವಿವೇಕ ಅವರ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.

1989ರಲ್ಲಿ ಪುದು ಪುದು ಅರ್ಥಂಗಳ್ ಅನ್ನೋ ಚಿತ್ರದ ಮೂಲಕ ಬಣ್ಣದ ಬದುಕಿಗೆ ಪ್ರವೇಶ ಪಡೆದಿದ್ದರು. ಮುಂದೆ ಸಾಲು ಸಾಲು ಚಿತ್ರಗಳಲ್ಲಿ ನಟಿಸುವ ಮೂಲಕ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡರು. ಇವರಿಗೆ ಕಲಾಸೇವೆಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.




Leave a Reply

Your email address will not be published. Required fields are marked *

error: Content is protected !!