ತೇಜಪಾಲ್ ಲೈಂಗಿಕ ದೌರ್ಜನ್ಯ ಪ್ರಕರಣ: ಮೇ 12ಕ್ಕೆ ತೀರ್ಪು

274

ಪ್ರಜಾಸ್ತ್ರ ಸುದ್ದಿ

ನವದೆಹಲಿ: ತೆಹೆಲ್ಕಾ ಪತ್ರಿಕೆಯ ಸಂಸ್ಥಾಪಕ ಸಂಪಾದಕ ತರುಣ ತೇಜಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣದ ತೀರ್ಪನ್ನ ಮೇ 12ಕ್ಕೆ ಪ್ರಕಟಿಸಲಾಗುವುದು ಎಂದು ಗೋವಾ ಸೆಷನ್ಸ್ ಕೋರ್ಟ್ ಹೇಳಿದೆ. ಯಾವುದೇ ಕಾರಣ ನೀಡದೆ ತೀರ್ಪು ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.

ತೆಹೆಲ್ಕಾ ಪತ್ರಿಕೆಯ ಸಂಸ್ಥಾಪಕ ಸಂಪಾದಕ ತೇಜಪಾಲ್ ವಿರುದ್ಧ 2013ರಲ್ಲಿ ಕಿರಿಯ ಸಹದ್ಯೋಗಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ಥಿಂಕ್ ಫೆಸ್ಟ್ ಕಾರ್ಯಕ್ರಮದ ವೇಳೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ದೂರು ನೀಡಿದ್ದಾರೆ. ಇದರ ವಿಚಾರಣೆ ಕಳೆದ ಮಾರ್ಚ್ ನಲ್ಲಿ ಮುಗಿದಿದೆ. ಏಪ್ರಿಲ್ 27ರಂದು ತೀರ್ಪು ಪ್ರಕಟಿಸುವುದಾಗಿ ಕೋರ್ಟ್ ಹೇಳಿತ್ತು. ಆದ್ರೆ, ಇಂದು ಮೇ 12ಕ್ಕೆ ತೀರ್ಪು ಮುಂದೂಡಲಾಗಿದೆ.




Leave a Reply

Your email address will not be published. Required fields are marked *

error: Content is protected !!