ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಶಿಕ್ಷಕ

243

ಪ್ರಜಾಸ್ತ್ರ ಸುದ್ದಿ

ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿರುವುದು ಬೆಳಕಿಗೆ ಬಂದಿದೆ. ಇದರಿಂದಾಗಿ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.

ಆನ್ಲೈನ್ ಕ್ಲಾಸ್ ನೆಪದಲ್ಲಿ ಮೊಬೈಲ್ ನಂಬರ್ ಪಡೆದಿದ್ದ ಶಿಕ್ಷಕ ಮಲ್ಲಪ್ಪ ತಳವಾರ ಎಂಬಾತ, ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾನೆ. ಅದರ ಸ್ಕ್ರೀನ್ ಶಾಟ್ ಎಲ್ಲೆಡೆ ವೈರಲ್ ಆಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಮುಂದಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!