ಆದರ್ಶ ಶಿಕ್ಷಕ ಪ್ರಶಸ್ತಿ ಸಮಾರಂಭ ಮುಂದೂಡಿಕೆ

269

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ದೈಹಿಕ ಶಿಕ್ಷಕರ ಸಂಘದ ಸಹಯೋಗದಲ್ಲಿ ಸೆಪ್ಟೆಂಬರ್ 5ರಂದು ನಡೆಯಬೇಕಿದ್ದ ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಸಮಾರಂಭ ಮುಂದೂಡಲಾಗಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಶೋಕಾಚಾರಣೆ ಇದ್ದು, ಅದ್ಧೂರಿ ಸಭೆ, ಸಮಾರಂಭಗಳನ್ನ ನಡೆಸಲಾಗುತ್ತಿಲ್ಲ. ಹೀಗಾಗಿ ಸೆಪ್ಟೆಂಬರ್ 5ರಂದು ನಡೆಯಬೇಕಿದ್ದ ಕಾರ್ಯಕ್ರಮ ಸೆಪ್ಟೆಂಬರ್ 7, ಸೋಮವಾರದಂದು ನಡೆಯಲಿದೆ ಎಂದು ಕಸಾಪ ಅಧ್ಯಕ್ಷರಾದ ಸಿದ್ದಲಿಂಗ ಚೌಧರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!