ಟೀಂ ಇಂಡಿಯಾಗೆ ಶುಭ ಕೋರಿದ ಪ್ರಧಾನಿ

158

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿರುವ ಏಳೂ ಪಂದ್ಯಗಳಲ್ಲಿ ಜಯ ಸಾಧಿಸಿ ಸೆಮಿ ಫೈನಲ್ ಪ್ರವೇಶಿಸಿದೆ. ಜೊತೆಗೆ ಹತ್ತು ಹಲವು ದಾಖಲೆಗಳನ್ನು ಟೀಂ ಇಂಡಿಯಾ ಆಟಗಾರರು ಮಾಡುತ್ತಿದ್ದಾರೆ. ಗುರುವಾರದ ಪಂದ್ಯದಲ್ಲಿ ಲಂಕಾ ವಿರುದ್ಧ 302 ರನ್ ಗಳ ಬೃಹತ್ ಅಂತರದಿಂದ ಗೆದ್ದಿದ್ದು, ಪ್ರಧಾನಿ ಮೋದಿ ಶುಭ ಕೋರಿದ್ದಾರೆ.

ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಈ ಕುರಿತು ಬರೆದಿರುವ ಅವರು, ವಿಶ್ವಕಪ್ ನಲ್ಲಿ ಭಾರತ ತಂಡವನ್ನು ತಡೆಯುವುದು ಅಸಾಧ್ಯ ಎಂದಿದ್ದಾರೆ. ಅದ್ಭುತವಾದ ವಿಜಯ ಸಾಧಿಸಿದಕ್ಕೆ ಅಭಿನಂದನೆಗಳು. ತಂಡದ ಶ್ರಮದಿಂದ ಈ ಗೆಲುವು ಸಾಧ್ಯ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!