ನಟ ಮಹೇಶ್ ಬಾಬು ತಂದೆ ಕೃಷ್ಣ ನಿಧನ

276

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಹೈದರಾಬಾದ್: ತೆಲುಗು ಸಿನಿ ದುನಿಯಾದ ಹಿರಿಯ ನಟ ಕೃಷ್ಣ(80) ಮಂಗಳವಾರ ನಿಧನರಾಗಿದ್ದಾರೆ. ಇವರ ಮಗ ಖ್ಯಾತ ನಟ ಮಹೇಶ್ ಬಾಬು ಆಗಿದ್ದಾರೆ. ಕೆಲವು ದಿನಗಳ ಹಿಂದೆ ತಾಯಿ ಹಾಗೂ ಸಹೋದರನನ್ನು ಕಳೆದುಕೊಂಡಿದ್ದ ಮಹೇಶ್ ಬಾಬು, ಈಗ ತಂದೆಯನ್ನು ಕಳೆದುಕೊಂಡಿದ್ದಾರೆ.

ಬಹುಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದರು. ನಿನ್ನೆ ಸಂಜೆ ಉಸಿರಾಟದ ತೊಂದರೆಯಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃಷ್ಣ ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.

ಸುಮಾರು 350ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 1965ರಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೊತೆಗೆ ನಿರ್ದೇಶನಕ್ಕೆ ಕೈ ಹಾಕಿ 17 ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಇವರ ಸಾಧನೆಗೆ ಕೇಂದ್ರ ಸರ್ಕಾರ 2009ರಲ್ಲಿ ಪ್ರತಿಷ್ಠಿತ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಜನವರಿಯಲ್ಲಿ ಸಹೋದರ, ಸೆಪ್ಟೆಂಬರ್ ನಲ್ಲಿ ತಾಯಿಯನ್ನು ಮಹೇಶ್ ಬಾಬು ಕಳೆದುಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!