ಪುರಾತನ ದೇಗುಲ ನೆಲಸಮ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ

230

ಪ್ರಜಾಸ್ತ್ರ ಸುದ್ದಿ

ಮೈಸೂರು: ನಂಜನಗೂಡಿನಲ್ಲಿ ಪುರಾತನ ದೇವಸ್ಥಾನ ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು, ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಬಿಜೆಪಿ ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮೊದಲು ಹಿಂದುತ್ವ ರಕ್ಷಣೆ ನೆನಪಾಗಲಿಲ್ಲವೇ? ದೇವಸ್ಥಾನ ಕೆಡವಿ ಹಾಕಿದ ಘಟನೆ ಬಗ್ಗೆ ಸಿಎಂ ನಿಷ್ಪಕ್ಷಪಾತ ತನಿಖೆ ನಡೆಸಿ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!