ಸರ್ಕಾರದ ವಿರುದ್ಧ ಮೊಳಗಿದ ಕನ್ನಡದ ಕಹಳೆ

249

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ನಡೆದ ದೋಷ ಹಾಗೂ ವಿವಾದಾತ್ಮಕ ವಿಚಾರಗಳಿಗೆ ಕುರಿತಂತೆ ಇಂದು ಸಿಲಿಕಾನ್ ಸಿಟಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಷ್ಟ್ರಕವಿ ಕುವೆಂಪು, ಕನ್ನಡಪರ, ದಲಿತಪರ ಸಂಘಟನೆಗಳು ಸೇರಿದಂತೆ ಇತರೆ ಸಂಘಟನೆಗಳು ಕೂಡಿಕೊಂಡು ಬೃಹತ್ ಪ್ರತಿಭಟನೆ ನಡೆಸಿದವು.

ರೋಹಿತ್ ಚಕ್ರತೀರ್ಥ ಅಧ್ಯಕ್ಷೀಯ ಸಮಿತಿಯಿಂದ ನಾಡಿನ ಹಿರಿಯ ಸಾಹಿತಿಗಳಿಗೆ, ಶರಣರಿಗೆ, ಸಮಾಜ ಸುಧಾರಕರಿಗೆ ಅವಮಾನ ಮಾಡಲಾಗಿದೆ. ಇತಿಹಾಸವನ್ನು ತಿರಿಚುವ ಕೆಲಸ ಮಾಡಲಾಗಿದೆ ಎಂದು ಹೇಳಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಕೂಡಲೇ ಪರಿಷ್ಕರಣೆಗೊಂಡ ಪಠ್ಯಪುಸ್ತಕ ವಾಪಸ್ ಪಡೆಯಬೇಕು. ಆಗಿರುವ ತಪ್ಪುಗಳನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಹಿಂದಿನ ಪಠ್ಯಪುಸ್ತಕಗಳನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಿದ್ದರು. ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಹಿರಿಯ ಸಾಹಿತಿಗಳು, ಚಿಂತಕರು, ಸಾಮಾಜಿಕ ಹೋರಾಟಗಾರರು, ಕನ್ನಡಪರ ಸಂಘಟನೆಗಳ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜನರು ಸೇರಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.




Leave a Reply

Your email address will not be published. Required fields are marked *

error: Content is protected !!