‘ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ನಾನು ಹಿಂದೆ ಸರಿದಿದ್ದೇನೆ’

78

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಆದರೆ, ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬರಗೂರು ರಾಮಚಂದ್ರಪ್ಪ, ನಾನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ಹಿಂದೆ ಸರಿದಿದ್ದೇನೆ ಅಂತಾ ತಿಳಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಗೆ ಹೊಸ ಸಮಿತಿ ರಚನೆಯಾಗಿಲ್ಲ. ನಾನು ಸಮಿತಿ ಅಧ್ಯಕ್ಷನಾಗಲು ಒಪ್ಪಿಗೆ ನೀಡಿಲ್ಲ. ಸಮಿತಿಯಿಂದ ನಾನು ಹಿಂದೆ ಸರಿದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆದಿತ್ತು. ಈ ವೇಳೆ ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಲು ಸೂಚನೆ ನೀಡಿದ್ದರು.




Leave a Reply

Your email address will not be published. Required fields are marked *

error: Content is protected !!