ಜು.11ರಂದು ರಾಜ್ಯಪಾಲರಾಗಿ ಗೆಹ್ಲೋಟ್ ಪ್ರಮಾಣ ವಚನ

218

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಜುಲೈ 11ರಂದು ಬೆಳಗ್ಗೆ 10.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗ್ಲಾಸ್ ಗೌಸ್ ನಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ಅವರು ಪ್ರಮಾಣ ವಚನ ಹಾಗೂ ಗೌಪ್ಯತೆಯನ್ನ ಬೋಧಿಸಲಿದ್ದಾರೆ. ಇತ್ತೀಚೆಗೆ ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನ ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಆದೇಶಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!