ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ: 10 ವರ್ಷ ಜೈಲು, 1 ಕೋಟಿ ದಂಡ

136

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಅಕ್ರಮ ತಡೆಯುವ ನಿಟ್ಟಿನಲ್ಲಿ ಸಾರ್ವಜಿಕ ಪರೀಕ್ಷೆ ಮಸೂದೆ 2024 ಅನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಗಿದೆ. ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮವೆಸಗಿರುವುದು ಸಾಬೀತಾದರೆ 10 ವರ್ಷ ಜೈಲು ಶಿಕ್ಷೆ, 1 ಕೋಟಿ ದಂಡ ವಿಧಿಸುವುದಕ್ಕೆ ಇದರಲ್ಲಿ ಅವಕಾಶವಿದೆ.

ಇದು ವಿದ್ಯಾರ್ಥಿಗಳನ್ನು ಗುರಿಯಾಗಿಟ್ಟುಕೊಂಡು ಮಸೂದೆ ಮಾಡಿರುವುದಲ್ಲ. ಅಕ್ರಮವೆಸಗುವ ಮಾಫಿಯಾ, ಸರ್ಕಾರಿ ಅಧಿಕಾರಿಗಳು, ಸಂಘಟಿತ ಗುಂಪುಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ಇದನ್ನು ಅಂಗೀಕರಿಸಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!