ರಂಗಭೂಮಿ ಕಲಾವಿದೆ ಮಮತಾ ಗೂಡೂರ ನಿಧನ

359

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಬಾಗಲಕೋಟೆ: ಜಿಲ್ಲೆಯ ಹಿರಿಯ ರಂಗಭೂಮಿ ಕಲಾವಿದೆ ಮಮತಾ ಗೂಡೂರ(75) ಅವರು ಬುಧವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವವಾಗಿತ್ತು. ಹೀಗಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.

ಇಳಕಲ್ ತಾಲೂಕಿನ ಗೂಡೂರ ಗ್ರಾಮದ ಮಮತಾ ಅವರು, ಸುಮಾರು 2 ಸಾವಿರಕ್ಕೂ ಹೆಚ್ಚು ನಾಟಕಗಳಲ್ಲಿ ನಟಿಸಿದ್ದಾರೆ. 20ಕ್ಕೂ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹತ್ತು ಹಲವು ಪ್ರಶಸ್ತಿ, ಸನ್ಮಾನಗಳು ಸಂದಿವೆ.




Leave a Reply

Your email address will not be published. Required fields are marked *

error: Content is protected !!