ಸಿಂದಗಿಯಲ್ಲಿ ಸಿಕ್ಕಿಬಿದ್ದವನು ಕಳ್ಳನೋ..? ಮಾನಸಿಕ ಅಸ್ವಸ್ಥನೋ?

406

ಪ್ರಜಾಸ್ತ್ರ ಅಪರಾಧ ಸುದ್ದಿ

ಸಿಂದಗಿ: ಮನೆ ಕಳ್ಳತನಕ್ಕೆ ಬಂದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿರುವ ಘಟನೆ ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಸಂಭವಿಸಿದೆ. ಜಗದೀಶ ಹೊನ್ನಳ್ಳಿ ಎಂಬುವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ವೇಳೆ ಸಿಕ್ಕಿಬಿದ್ದಿದ್ದಾನೆ.

ವ್ಯಕ್ತಿಯನ್ನು ಮನೆಯವರು ಹಿಡಿದು ಹಗ್ಗದಿಂದ ಕಟ್ಟಿ ಹಾಕಿದ್ದಾರೆ. ನಂತರ ಸಿಂದಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ ಆತ ಮಾನಸಿಕ ಅಸ್ವಸ್ಥನೆಂದು ಹೇಳಲಾಗುತ್ತಿದೆ. ಅದು ಸುಳ್ಳೋ ಸತ್ಯವೋ ಅನ್ನೋದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!