ಮುದ್ದೇಬಿಹಾಳದಲ್ಲಿ ಕಳ್ಳರ ಕೈಚಳಕ

301

ಪ್ರಜಾಸ್ತ್ರ ಅಪರಾಧ ಸುದ್ದಿ

ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಸಂಗಮೇಶ್ವರ ಬಡಾವಣೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಬಡಾವಣೆಯ ಅಡಿವೆಪ್ಪ ಬೋಳಶೆಟ್ಟಿಯವರ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಬೀಗ ಮುರಿದು 160 ಗ್ರಾಂ ಚಿನ್ನಾಭರಣ ಹಾಗೂ ಅಂದಾಜು ಒಂದು ಲಕ್ಷ ರೂಪಾಯಿ ಕಳ್ಳತನ ಮಾಡಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!