ಓದಿದ್ದು ಇಂಜಿನಿಯರಿಂಗ್.. ಮಾಡತಿದ್ದಿದ್ದು ಕಳ್ಳತನ..

549

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಕಂಪ್ಯೂಟರ್ ಬಿಡಿ ಭಾಗಗಳನ್ನ ಕದ್ದು ಮಾರಾಟ ಮಾಡುತ್ತಿದ್ದ ಹೈಟೆಕ್ ಕಳ್ಳನನ್ನ ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ರಾಜಪಾತ್ರ ಬಂಧಿತ ಆರೋಪಿಯಾಗಿದ್ದಾನೆ.

ಇಂಜಿನಿಯರಿಂಗ್ ಮುಗಿಸಿರುವ ಈತ, ಪ್ರತಿಷ್ಠತ ಕಾಲೇಜುಗಳಲ್ಲಿ ಸೆಕ್ಯೂರಿಟಿ ಕೆಲಸಕ್ಕೆ ಸೇರಿಕೊಳ್ಳುತ್ತಿದ್ದ. ಬಳಿಕ ಅಲ್ಲಿನ ಕಂಪ್ಯೂಟರ್ ಗಳ ಬಿಡಿ ಭಾಗಗಳನ್ನ ಕದ್ದು ಪರಾರಿಯಾಗುತ್ತಿದ್ದ. ನಂತರ ಅವುಗಳನ್ನ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದ. ಇದುವರೆಗೂ ಸುಮಾರು 40 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನ ಕಳ್ಳತನ ಮಾಡಿದ್ದಾನೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!