ವಿಜಯಪುರದಲ್ಲಿ ಈ ಬಾರಿ ಹೆಚ್ಚು ಮಳೆ: ಮುನ್ನೆಚ್ಚರಿಕಾ ಕ್ರಮದ ಕುರಿತು ಡಿಸಿ ಸಭೆ

387

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಹವಾಮಾನ ಇಲಾಖೆ ವರದಿ ಪ್ರಕಾರ ಜಿಲ್ಲೆಯಲ್ಲಿ ಈ ಬಾರಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಹೇಳಿದ್ರು. ಹೀಗಾಗಿ ಇಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತ್ನಾಡಿ, ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳಬೇಕು ಎಂದರು.

ನದಿ ತೀರಿದಲ್ಲಿ ವಾಸಿಸುವ ಜನರನ್ನ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳಾಂತರಿಸುವುದು. ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಯಲ್ಲಿ 24X7 ಕಂಟ್ರೋಲ್ ರೂಮ್, ಜಿಲ್ಲಾ ವಿಪತ್ತ ನಿರ್ವಹಣಾ ಸಮಿತಿಯಿಂದ ತಾಲೂಕುವಾರು ನೋಡಲ್ ಅಧಿಕಾರಿ ನೇಮಕ, ಕೃಷಿ, ತೋಟಗಾರಿಕೆ ಇಲಾಖೆಯಿಂದ ಪ್ರತಿ ದಿನ ಬೆಳಗ್ಗೆ 11 ಗಂಟೆಯೊಳಗೆ, ಪ್ರಕೃತಿ ವಿಕೋಪದಿಂದಾದ ಮನಷ್ಯ, ಜಾನುವಾರು ಹಾನಿ, ಕೃಷಿ, ತೋಟಗಾರಿಕೆ ಬೆಳೆಗಳ ಹಾನಿ ಹಾಗೂ ಮನೆ ಬಿದ್ದಿರುವ ವರದಿ ನೀಡಬೇಕು ಎಂದು ತಿಳಿಸಿದ್ದಾರೆ.

ಗ್ರಾಮಗಳಲ್ಲಿ ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕಾರ್ಯದರ್ಶಿ, ಗ್ರಾಮ ಪಂಚಾಯ್ತಿ, ಹೋಬಳಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನಿಯೋಜನೆ. ಪ್ರವಾಹ ಪರಿಸ್ಥಿತಿ ಉಂಟಾದ್ರೆ ಜನರನ್ನ ಎತ್ತರದ ಪ್ರದೇಶಕ್ಕೆ ಸ್ಥಳಾಂತರ, ಸಮುದಾಯ ಭವನ, ಬೃಹತ್ ಕಟ್ಟಡಗಳನ್ನ ಗುರುತಿಸಿಟ್ಟುಕೊಳ್ಳಬೇಕು. ಗಂಜಿಕೇಂದ್ರ, ಬಿಸಿ ಊಟಕ್ಕೆ ಆಹಾರ ಸಾಮಗ್ರಿಗಳ ಸಂಗ್ರಹ ಮಾಡಬೇಕು. ಕೂಡಲೇ ಚರಂಡಿಗಳನ್ನ ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಹೋಗುವಂತೆ ನೋಡಿಕೊಳ್ಳಬೇಕು ಎಂದರು.

ಈ ವೇಳೆ ಜಿಲ್ಲಾ ಪಂಚಾಯ್ತಿ ಸಿಇಒ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ್, ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಇಂಡಿ ಉಪ ವಿಭಾಗಾಧಿಕಾರಿ ಸ್ನೇಹಲ್ ಲೋಖಂಡೆ ಸೇರಿದಂತೆ ಅನೇಕರು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!