ತೌಕ್ತೆ ಚಂಡಮಾರುತ: ಗುಜರಾತಗೆ 1 ಸಾವಿರ ಕೋಟಿ ಘೋಷಿಸಿದ ಪ್ರಧಾನಿ

237

ಪ್ರಜಾಸ್ತ್ರ ಸುದ್ದಿ

ಅಹಮದಾಬಾದ್: ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಗುಜರಾತಿನ ಪ್ರದೇಶಗಳಿಗೆ ಪ್ರಧಾನಿ ಮೋದಿ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಉನಾ, ಜಾಫ್ರಾಬಾದ್, ಮಾಹುವಾ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಿದ್ರು.

ಗುಜರಾತ್ ಮತ್ತು ಡಿಯುನಲ್ಲಿ ನಡೆಯುತ್ತಿರುವ ಪರಿಹಾರ ಹಾಗೂ ಪುನರ್ವಸತಿ ಕಾರ್ಯದ ಕುರಿತು, ಅಹಮದಾಬಾದ್ ನಲ್ಲಿ ಸಭೆ ನಡೆಸಿದ್ರು. ಈ ವೇಳೆ ತವರು ರಾಜ್ಯಕ್ಕೆ 1 ಸಾವಿರ ಕೋಟಿ ನೆರವು ಘೋಷಿಸಿದ್ರು. ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಅನ್ನೋದರ ವರದಿ ಮೇಲೆ ಹೆಚ್ಚಿನ ನೆರವನ್ನ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದರು.

ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ, ರಾಜಸ್ಥಾನ್, ದಮನ್ ಮತ್ತು ಡಿಯು, ದಾದ್ರಾ ಮತ್ತು ನಗರ ಹವೇಲಿ ರಾಜ್ಯಗಳಲ್ಲಿ ಚಂಡಮಾರುತದಿಂದ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ, ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಘೋಷಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!