ನಟ ಶಾರುಖ್ ಗೆ ಜೀವ ಬೆದರಿಕೆ: ವೈ ಪ್ಲಸ್ ಭದ್ರತೆ

222

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ಅವರಿಗೆ ವೈ ಪ್ಲಸ್ ಭದ್ರತೆಯನ್ನು ಒದಗಿಸಿದೆ. 6 ವೈಯಕ್ತಿಕ ಭದ್ರತಾ ಅಧಿಕಾರಿಗಳು, ಐದು ಶಾಸ್ತ್ರಸಜ್ಜಿತ ಗಾರ್ಡ್ ಗಳು ಇವರ ಜೊತೆ ಇರಲಿದ್ದಾರೆ.

ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾತನಾಡಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಭದ್ರತೆ ಪಡೆಯುವರು ಸರ್ಕಾರಕ್ಕೆ ಭದ್ರತಾ ಠೇವಣಿ ಇಡಬೇಕು ಹಾಗೂ ಶುಲ್ಕವನ್ನು ಭರಿಸಬೇಕು ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!