ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಇನ್ನು ಮೂರು ಡಿಸಿಎಂ ಸ್ಥಾನಗಳನ್ನು ನಿರ್ಮಿಸಬೇಕು ಅನ್ನೋ ಸಚಿವ ಕೆ.ಎನ್ ರಾಜಣ್ಣ ಹೇಳಿಕೆಯನ್ನು, ಮಾಜಿ ಡಿಸಿಎಂ, ಸಚಿವ ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಕೆ.ಎನ್ ರಾಜಣ್ಣ ಹೇಳೋದರಲ್ಲಿ ತಪ್ಪಿಲ್ಲ. ಯಾವ ಅರ್ಥದಲ್ಲಿ ಕೊಟ್ಟಿದ್ದಾರೆ ಅನ್ನೋದು ಮುಖ್ಯ. ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.
ಲೋಕಸಭಾ ದೃಷ್ಟಿಯಿಂದ ಅವರು ಹೇಳಿದ್ದಾರೆ. ಪಕ್ಷ ಇನ್ನಷ್ಟು ಬಲಿಷ್ಠವಾಗಬೇಕು. ನಿರ್ದಿಷ್ಟ ಸಮುದಾಯಗಳನ್ನು ಸೆಳೆಯಬೇಕು ಅನ್ನೋ ದೃಷ್ಟಿಯಿಂದ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಮಗೆ ಹೆಚ್ಚು ಸ್ಥಾನ ಬಂದರೆ ಒಳ್ಳೆಯದಲ್ಲ. ಅದಕ್ಕೆ ಇದೆಲ್ಲ ಎನ್ನುವ ಮೂಲಕ ಸಚಿವ ರಾಜಣ್ಣ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.