ಒಂದೇ ಕುಟುಂಬದ ಮೂವರು ಆತ್ಮಹತ್ಯೆ

86

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಯಿ ಸುಕನ್ಯಾ(48), ಮಕ್ಕಳಾದ ನಿಖಿತ್(28) ಹಾಗೂ ನಿಶ್ಚಿತ್(26) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.

ಮೂಲತಃ ಉಡುಪಿ ಜಿಲ್ಲೆಯವರಾಗಿದ್ದು ಬೆಂಗಳೂರಿನಲ್ಲಿ ಬಂದು ನೆಲೆಸಿದ್ದರು. ಜೆ.ಪಿ ನಗರದ 6ನೇ ಮುಖ್ಯರಸ್ತೆಯಲ್ಲಿ ವಾಸವಾಗಿದ್ದರು. ಬ್ಯಾಂಕ್ ನಲ್ಲಿ ಮಾಡಿಕೊಂಡಿರುವ ಸಾಲದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಅನ್ನೋ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!