ಭರ್ಜರಿ ಮಳೆ: ಬಿಹಾರದಲ್ಲಿ ಸಿಡಿಲಿಗೆ 92 ಜನರ ಸಾವು

332

ಪ್ರಜಾಸ್ತ್ರ ಸುದ್ದಿ

ಪಾಟ್ನಾ: ಬಿಹಾರದಲ್ಲಿ ಭಾರೀ ಮಳೆ, ಗಾಳಿಯಿಂದ ಸತತವಾಗಿ ಮಳೆ ಸುರಿಯುತ್ತಿದೆ. ಇದ್ರಿಂದಾಗಿ ಅಪಾರ ಪ್ರಮಾಣದ ಜೀವಹಾನಿ ಸಂಭವಿಸಿವೆ. ವಿಪತ್ತು ನಿರ್ವಹಣಾ ಇಲಾಖೆ ಇಂದು ಬಿಡುಗಡೆ ಮಾಡಿರುವ ವರದಿಯಲ್ಲಿ, ರಾಜ್ಯದ ವಿವಿಧ ಜಿಲ್ಲೆಗಳಿಂದ 92 ಜನರು ಸಾವನ್ನಪ್ಪಿದ್ದಾರೆ.

ಸಿಡಿಲಿನಿಂದ ಗುರುವಾರ ಸಾವನ್ನಪ್ಪಿದವರ ಸಂಖ್ಯೆ 85 ಇತ್ತು. ಇದೀಗ ಮತ್ತೊಂದು ವರದಿ ರಿಲೀಸ್ ಮಾಡಿದ್ದು 92ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ. ಇದರ ಜೊತೆಗೆ ಉತ್ತರ ಪ್ರದೇಶದಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ಈ ಎರಡು ರಾಜ್ಯಗಳಿಂದ 116 ಮಂದಿ ಸಿಡಿಲಿಗೆ ಬಲಿಯಾಗಿದ್ದಾರೆ.

ಒಂದ್ಕಡೆ ಕರೋನಾ ಜನರ ಜೀವ ಬಲಿ ಪಡೆಯುತ್ತಿದ್ದರೆ, ಇನ್ನೊಂದ್ಕಡೆ ಮಳೆಯಿಂದ ಸಾವು ನೋವುಗಳು ಸಂಭವಿಸ್ತಿವೆ. ಸಿಡಿಲಿಗೆ ಇಷ್ಟೊಂದು ಪ್ರಮಾಣದಲ್ಲಿ ಜನರು ಸಾವನ್ನಪ್ಪಿರುವುದು ನಿಜಕ್ಕೂ ಆತಂಕಕಾರಿಯಾದ ಸಂಗತಿಯಾಗಿದೆ.




Leave a Reply

Your email address will not be published. Required fields are marked *

error: Content is protected !!