ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಕಾಲಾವಕಾಶ!

273

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯ ತಯಾರಿಯನ್ನು ರಾಜಕೀಯ ಪಕ್ಷಗಳು ಭರ್ಜರಿಯಾಗಿ ನಡೆಸಿವೆ. ಇದೆ ರೀತಿ ಚುನಾವಣಾ ಆಯೋಗ ಹೊಸ ಮತದಾರರ ಹೆಸರು ಸೇರ್ಪಡೆ, ಬದಲಾವಣೆ, ತೆಗೆದು ಹಾಕುವುದು ಸೇರಿದಂತೆ ವಿವಿಧ ಕೆಲಸಗಳಿಗೆ ಕಾಲಾವಕಾಶ ನೀಡಲಾಗಿದೆ.

ಚುನಾವಣಾ ಆಯೋಗವು 224 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ ನಡೆಸಿದೆ. ಮುಂದಿನ ವರ್ಷ ಜನವರಿ 1ಕ್ಕೆ 18 ವರ್ಷ ತುಂಬಿದವರು ಸಹ ಮತದಾರ ಹೆಸರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನು ಹೆಸರು ಬದಲಾವಣೆ, ತಿದ್ದುಪಡಿ, ಸೇರ್ಪಡೆ, ಕ್ಷೇತ್ರ ಬದಲಾವಣೆ, ತೆಗೆದು ಹಾಕುವುದಕ್ಕೆ ಒಂದು ತಿಂಗಳವರೆಗೂ ವಿಸ್ತರಿಸಲಾಗಿದೆಯಂತೆ. ಡಿಸೆಂಬರ್ 8ರ ತನಕ ಅವಕಾಶ ನೀಡಲಾಗಿದೆ. ಮುಂದಿನ ವರ್ಷ ಜನವರಿಯಲ್ಲಿ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.




Leave a Reply

Your email address will not be published. Required fields are marked *

error: Content is protected !!