ಇಂದು 100 ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್!

225

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜೆಡಿಎಸ್ ಪಂಚರತ್ನ ಯಾತ್ರೆಯ ಆರಂಭದಲ್ಲೇ 2023ರ ವಿಧಾನಸಭಾ ಚುನಾವಣೆ ಸಂಬಂಧ 100 ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಲಾಗುತ್ತೆ ಎಂದು ಹೇಳಲಾಗುತ್ತು. ಆದರೆ, ನಂತರ ಕೈ ಬಿಡಲಾಯಿತು. ಇಂದು ನಗರ ಜೆಡಿಎಸ್ ಕಚೇರಿಯಲ್ಲಿ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಲಾಗುತ್ತೆ ಎಂದು ತಿಳಿದು ಬಂದಿದೆ.

ಶುಕ್ರವಾರ ಶ್ರೀನಿವಾಸ ಕಲ್ಯಾಣ ಮುಗಿದ ನಂತರ 97 ರಿಂದ 116 ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತೆ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. 15-20 ಜೆಡಿಎಸ್ ನಾಯಕರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಅವರ ಪಕ್ಷದಿಂದ ಯಾರು ಯಾರು ಹೊರಗೆ ಹೋಗುತ್ತಾರೆ ಅನ್ನೋ ಪಟ್ಟಿ ನನ್ನ ಹತ್ತಿರ ಇದೆ ಎಂದು ಟಾಂಗ್ ಕೊಟ್ಟರು.




Leave a Reply

Your email address will not be published. Required fields are marked *

error: Content is protected !!