ದೇಶದಲ್ಲಿ ಮತ್ತಷ್ಟು ಇಳಿಕೆ ಕಂಡ ಕರೋನಾ

259

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಕಳೆದ 24 ಗಂಟೆಯಲ್ಲಿ 86,498 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಇದೆ ಮೊದಲ ಬಾರಿಗೆ 1 ಲಕ್ಷಕ್ಕಿಂತ ಕಡಿಮೆ ಸೋಂಕಿತರು ದಾಖಲಾಗಿದ್ದಾರೆ. ದೇಶದಲ್ಲಿ ಇಲ್ಲಿಯ ತನಕ 2,89,96,473ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

13,03,702 ಪ್ರಕರಣಗಳು ಸಕ್ರಿಯವಾಗಿವೆ. 1,82,282 ಜನರು 24 ಗಂಟೆಯಲ್ಲಿ ಗುಣಮುಖರಾಗಿದ್ದಾರೆ. ಇದುವರೆಗೂ 2,73,41,462 ಜನರ ಡಿಸ್ಚಾರ್ಜ್ ಆಗಿದ್ದಾರೆ. 2,123 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಲ್ಲಿಯವರೆಗೂ 3,51,309ಜನರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ ಇದುವರೆಗೂ 23,61,98,726 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ.




Leave a Reply

Your email address will not be published. Required fields are marked *

error: Content is protected !!