ಗ್ಯಾರಂಟಿ ಬಳಿಕ ಇಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

99

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈಗಾಗ್ಲೇ 7 ಗ್ಯಾರಂಟಿಗಳನ್ನು ನೀಡಿದೆ. ಇದೀಗ ಪ್ರಣಾಳಿಕೆ ಬಿಡುಗಡೆಗೆ ಸಜ್ಜಾಗಿದೆ. ಮತದಾನಕ್ಕೆ 8 ದಿನ ಬಾಕಿ ಉಳಿದಿರುವಾಗ ಕೈ ನಾಯಕರು ಇಂದು ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಾರೆ.

ಈಗಾಗ್ಲೇ ಸಾಕಷ್ಟು ಉಚಿತ ಕೊಡುಗೆಗಳನ್ನು ನೀಡುವ ಭರವಸೆ ನೀಡಿದೆ. ಈ ಬಗ್ಗೆ ಕಾಲೆಳೆದಿದ್ದ ಬಿಜೆಪಿ ಸೋಮವಾರದ ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೊಡುಗೆಗಳ ಭರವಸೆ ನೀಡಿದೆ. ಹೀಗಾಗಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಕುತೂಹಲ ಮೂಡಿದೆ.

ನಗರದ ಖಾಸಗಿ ಹೋಟೆಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿ ಅನೇಕರು ಭಾಗವಹಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!