ದೇಶದಲ್ಲಿಂದು 97 ಸಾವಿರಕ್ಕೂ ಅಧಿಕ ಸೋಂಕಿತರು

267

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಇಂದು ಸಹ 97 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 97,570 ಜನರಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 46 ಲಕ್ಷ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ 46,59,985 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರಲ್ಲಿ 36,24,197 ಜನರು ಗುಣಮುಖರಾಗಿದ್ದಾರೆ. ಇನ್ನು 9,58,316 ಪ್ರಕರಣಗಳು ಸಕ್ರಿಯವಾಗಿವೆ.

ದೇಶದಲ್ಲಿ 1,201 ಜನರು 24 ಗಂಟೆಯಲ್ಲಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 77,472ಕ್ಕೆ ಏರಿಕೆಯಾಗಿದೆ.




Leave a Reply

Your email address will not be published. Required fields are marked *

error: Content is protected !!