ರಾಜ್ಯದಲ್ಲಿಂದು ಮಳೆ ಸಾಧ್ಯತೆ: 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

275

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಮಳೆಯ ಆರ್ಭಟ ಜೋರಾಗಿದೆ. ಹೀಗಾಗಿ ಹಲವು ಜಿಲ್ಲೆಗಳ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಸಹ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲೆಖೆ ನೀಡಿದೆ.

ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು, ಗುರುವಾರ, ಶುಕ್ರವಾರ ಸಹ ಭರ್ಜರಿಯಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವು ಕಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!