5 ನಗರ ಸಭೆ, 19 ಪುರಸಭೆ ಹಾಗೂ 34 ಪ.ಪಂ ಎಲೆಕ್ಷನ್

243

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯಲ್ಲಿ ಇಂದು ಸ್ಥಳೀಯ ಸಂಸ್ಥೆಯ ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದೆ. ಆದರೆ, ಚಳಿ ಇರುವುದರಿಂದ ನಿಧಾನವಾಗಿ ಮತದಾರರು ಈಗ ಮತಗಟ್ಟೆ ಕಡೆ ಬರುತ್ತಿದ್ದಾರೆ.

ಜಿಲ್ಲೆಯ ಮುದ್ದೇಬಿಹಾಳ, ದೇವರಹಿಪ್ಪರಗಿ, ಸಿಂದಗಿ, ಆಲಮೇಲ ಸೇರಿದಂತೆ ವಿವಿಧ ಗ್ರಾಮ ಪಂಚಾಯ್ತಿಯ ಖಾಲಿಯಿರುವ ಸ್ಥಾನಗಳಿಗೆ ಹಾಗೂ ಪಟ್ಟಣ ಪಂಚಾಯ್ತಿಗಳಿಗೆ ಇಂದು ಮತದಾನ ನಡೆಯುತ್ತಿದೆ. ಈ ಮೂಲಕ ಇಡೀ ರಾಜ್ಯದಲ್ಲಿ 5 ನಗರ ಸಭೆ, 19 ಪುರಸಭೆ ಹಾಗೂ 34 ಪಟ್ಟಣ ಪಂಚಾಯ್ತಿ ಸೇರಿದಂತೆ 1,185 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!