ಕವಿವಿಯಲ್ಲಿ ರಾಷ್ಟ್ರಮಟ್ಟದ ಭಾವೈಕ್ಯತಾ ಶಿಬಿರ

496

ಪ್ರಜಾಸ್ತ್ರ ಸುದ್ದಿ

ಧಾರವಾಡ: ಕರ್ನಾಟ ವಿಶ್ವವಿದ್ಯಾಲಯದ ಮಾನಸೋಲ್ಲಾಸ ಸಭಾಂಗಣದಲ್ಲಿ ಇಂದು(ಫೆ.21,2022) ಮಧ್ಯಾಹ್ನ 3 ಗಂಟೆಗೆ ರಾಷ್ಟ್ರಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಆಯೋಜಿಸಲಾಗಿದೆ. ಭಾರತ ಸರ್ಕಾರದ ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆ, ಪ್ರಾಂತೀಯ ಎನ್ಎಸ್ಎಸ್ ನಿರ್ದೇಶನಾಲಯ ಬೆಂಗಳೂರು ಇವರ ಸಹಯೋಗದಲ್ಲಿ ಕಾರ್ಯಕ್ರಮ ನಡೆಯುತ್ತಿದೆ.

ಶಿಬಿರವನ್ನು ಧಾರವಾಡ ಜಿಲ್ಲಾ ಪಂಚಾಯತ ಸಿಇಓ ಡಾ. ಸುರೇಶ ಇಟ್ನಾಳ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರಕಾರದ ಎನ್ಎಸ್ಎಸ್ ಪ್ರಾದೇಶಿಕ ಅಧಿಕಾರಿ ಕೆ.ವಿ.ಖಾದ್ರಿ ನರಸಿಂಹಯ್ಯ ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಕವಿವಿ ಹಣಕಾಸು ಅಧಿಕಾರಿ ಗೀತಾ ಯರೇಶಿಮೆ, ವಿಶೇಷ ಅತಿಥಿಗಳಾಗಿ ಕರ್ನಾಟಕ ರಾಜ್ಯ ಶಿಕ್ಷಕ ಸಂಘದ ಅಧ್ಯಕ್ಷರಾದ ಬಸವರಾಜ ಗುರಿಕಾರ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕವಿವಿ ಮೌಲ್ಯಮಾಪನ ಕುಲಸಚಿವರಾದ ಡಾ. ಎಚ್.ನಾಗರಾಜ್ ವಹಿಸಲಿದ್ದಾರೆ.

ಶಿಬಿರದಲ್ಲಿ ಮಂಗಳೂರು, ಗುಲ್ಬರ್ಗ, ದಾವಣಗೆರೆ, ಬೆಳಗಾವಿ ರಾಣಿಚೆನ್ನಮ್ಮ ವಿವಿ ಸೇರಿದಂತೆ ಹೊರ ರಾಜ್ಯಗಳಾದ ಗುಜರಾತ್, ಒಡಿಸ್ಸಾ, ಮಧ್ಯಪ್ರದೇಶ, ತಮಿಳನಾಡು, ಅಸ್ಸಾಂ, ಆಂಧ್ರಪ್ರದೇಶ, ತೆಲಂಗಾಣ, ಉತ್ತರಾಖಂಡ, ಮಹಾರಾಷ್ಟ್ರ ಹಾಗೂ ಗೋವಾ ಸೇರಿ 11 ವಿವಿಧ ವಿಶ್ವವಿದ್ಯಾಲಯದ 210 ಎನ್ಎಸ್ಎಸ್ ಸ್ವಯಂ ಸೇವಕರು ಹಾಗೂ 14 ಕಾರ್ಯಕ್ರಮ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಎನ್ಎಸ್ಎಸ್ ಕೋಶದ ಸಂಯೋಜಕರಾದ ಡಾ ಎಂ.ಬಿ.ದಳಪತಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!