ಸರ್ವಾಧಿಕಾರಿ ನಡೆ ವಿರುದ್ಧ ಹೋರಾಡಬೇಕಿದೆ: ಸೋನಿಯಾ ಗಾಂಧಿ

72

ಪ್ರಜಾಸ್ತ್ರ ಸುದ್ದಿ

ಜೈಪುರ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ತಾವೇ ಶ್ರೇಷ್ಠವೆಂದು ಬಿಂಬಿಸಿಕೊಳ್ಳುತ್ತಿರುವ ಪ್ರಧಾನಿ ಮೋದಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಿತ್ತು ಹಾಕುತ್ತಿದ್ದಾರೆ ಎಂದು ಕಿಡಿ ಕಾರಿದರು.

ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ನಾಶಪಡಿಸಲಾಗುತ್ತಿದೆ. ಸಂವಿಧಾನ ಬದಲಾಯಿಸುವ ಸಂಚು ನಡೆಯುತ್ತಿದೆ. ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿ ಸೇರುವಂತೆ ಅನೇಕ ತಂತ್ರಗಳ ಮೂಲಕ ಒತ್ತಡ ಹಾಕಲಾಗುತ್ತಿದೆ. ಇಂತಹ ಸರ್ವಾಧಿಕಾರಿ ನಡೆಯ ವಿರುದ್ಧ ನಾವೆಲ್ಲ ಹೋರಾಡಬೇಕಿದೆ ಎಂದಿದ್ದಾರೆ.

ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರ, ನಿರುದ್ಯೋಗ, ಹಣದುಬ್ಬರ, ಅಸಮಾನತೆ ಹೋಗಲಾಡಿಸಲು ಏನನ್ನು ಮಾಡಲಿಲ್ಲ. ಪ್ರಜಾಪ್ರಭುತ್ವ ಪ್ರಸ್ತುತ ಅಪಾಯದಲ್ಲಿದೆ. ಇದನ್ನು ನಾಶ ಪಡಿಸುವ ಕೆಲಸ ನಡೆದಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಅನೇಕರು ಕೇಂದ್ರದ ಬಿಜೆಪಿ ಸರ್ಕಾರದ ಕಳೆದ 10 ವರ್ಷಗಳ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದರು.




Leave a Reply

Your email address will not be published. Required fields are marked *

error: Content is protected !!