ಇಂದು ಪಿಯುಸಿ ಫಲಿತಾಂಶ ಪ್ರಕಟ

455

ಬೆಂಗಳೂರು: ಕೋವಿಡ್ 19 ಲಾಕ್ ಡೌನ್ ನಿಂದಾಗಿ ಶೈಕ್ಷಣಕ ಕಾರ್ಯಗಳು ಸ್ಥಗತಗೊಂಡಿದ್ದು, ಮುಂದಿನ ಶೈಕ್ಷಣಿಕ ಚಟುವಟಿಕೆ ಸಲುವಾಗಿ ಪ್ರಥಮ ಪಿಯುಸಿ ಫಲಿತಾಂಶವನ್ನ ಇಂದು ಪ್ರಕಟಿಸಲಾಗ್ತಿದೆ. ಕರೋನಾ ವೈರಾಣುವಿನಿಂದಾಗಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ, ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಅಥವ ಮೇಲ್ ಗೆ ಫಲಿತಾಂಶ ಕಳುಹಿಸಲಾಗುತ್ತೆ.

ಮೇ 5ರಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಫೇಲ್ ಆದ ವಿದ್ಯಾರ್ಥಿಗಳಿಗೆ ಕಾಲೇಕು ಮಟ್ಟದಲ್ಲಿಯೇ ಪರೀಕ್ಷೆ ನಡೆಸಲು ಮಾನದಂಡ ನೀಡಿದೆ. ಇನ್ನು 2020-21ನೇ ಸಾಲಿನ ದಾಖಲಾತಿಗೆ ಸಂಬಂಧಿಸಿದಂತೆ ಖಾಸಗಿ ಕಾಲೇಜುಗಳು ಶುಲ್ಕ ಹೆಚ್ಚಳ ಮಾಡಬಾರದು. ಒಂದು ವೇಳೆ ಮಾಡಿರುವುದು ಕಂಡು ಬಂದ್ರೆ, ಅಂತವರ ವಿರುದ್ಧ ಸೂಕ್ತ ಕ್ರಮಗಳನ್ನ ತೆಗೆದುಕೊಳ್ಳಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!