‘ಉಡುಪಿ ವಿಡಿಯೋ ಕೇಸ್, ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ’

144

ಪ್ರಜಾಸ್ತ್ರ ಸುದ್ದಿ

ಉಡುಪಿ: ಇಲ್ಲಿನ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಬಿಜೆಪಿ ನಾಯಕಿ ಖುಷ್ಬು ಸುಂದರ್ ಗುರುವಾರ ಉಡುಪಿಗೆ ಭೇಟಿ ನೀಡಿದರು.

ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರೊಂದಿಗೆ ಸಭೆ ನಡೆಸಿದ ಮಾತನಾಡಿದ ಖುಷ್ಬು, ವಿಡಿಯೋ ರೆಕಾರ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಂಡಿದ್ದಾರೆ. ಈ ಕುರಿತು ವದಂತಿ ಹಬ್ಬಿಸಬಾರದು. ಇದು ಹೆಣ್ಮಕ್ಕಳ ರಕ್ಷಣೆಯ ವಿಚಾರ. ತನಿಖೆಗೆ ಸಮಯ ತೆಗೆದಕೊಳ್ಳುತ್ತೆ. ಇದರಲ್ಲಿ ರಾಜಕೀಯ ಮಾಡಬಾರದು ಅಂತಾ ಹೇಳಿದರು.

ಈ ಘಟನೆ ಸಂಬಂಧ ಈಗಾಗ್ಲೇ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಯುವ ಮೋರ್ಚಾದಿಂದ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಗೃಹ ಸಚಿವ ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಯತ್ನ ಸಹ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಇದು ಯಾವ ಸ್ವರೂಪ ಪಡೆದುಕೊಳ್ಳುತ್ತೆ ಕಾದು ನೋಡಬೇಕು.




Leave a Reply

Your email address will not be published. Required fields are marked *

error: Content is protected !!