ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಜೂನ್ ನಲ್ಲಿ ನಡೆದ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಗುರುವಾರ ಮಧ್ಯಾಹ್ನ 12 ಗಂಟೆಗೆ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ.
ಜೂನ್ 27 ರಿಂದ ಜುಲೈ 4ರವರೆಗೂ ಪರೀಕ್ಷೆಗಳು ನಡೆದಿವೆ. ಪೂರಕ ಪರೀಕ್ಷೆಯಲ್ಲಿ 94,669 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 37,479 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಹೇಳಲಾಗಿದ್ದು, ಅಧಿಕೃತವಾಗಿ ನಾಳೆ ವೆಬ್ ಸೈಟ್ ನಲ್ಲಿ ಹಾಗೂ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ನಂಬರ್ ಗೆ ಮೆಸೇಜ್ ಮೂಲಕ ಫಲಿತಾಂಶ ಬರಲಿದೆ.