ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ
ಧಾರವಾಡ: ಡಾ.ಎಂ.ಎಸ್.ಸುಂಕಾಪುರ 101ನೇಯ ಜನ್ಮದಿನದ ಪ್ರಯುಕ್ತ ಭಾನುವಾರ ಬೆಳಿಗ್ಗೆ 10:30ಕ್ಕೆ ನಗರದ ಕನ್ನಡ ಕುಲಪುರೋಹಿತ ಆಲೂರ ವೆಂಕಟರಾವ ಸಭಾಂಗಣದಲ್ಲಿ ‘ಕನ್ನಡ ಸಾಹಿತ್ಯದಲ್ಲಿ ಹಾಸ್ಯ’ ಕೃತಿ ಲೋಕಾರ್ಪಣೆಗೊಳ್ಳುತ್ತಿದೆ.
ಈ ಗ್ರಂಥ ಪ್ರಕಟಿಸಿದ ಸ್ವಪ್ನ ಬುಕ್ ಹೌಸ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಿದೆ. ಧಾರವಾಡದ ಮುರಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಕವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ ಕೃತಿ ಬಿಡುಗಡೆ ಮಾಡಲಿದ್ದಾರೆ.

ಕೃತಿಯ ಕುರಿತು ಡಾ.ಜಿ.ಎಂ.ಹೆಗಡೆ ಮಾತನಾಡಲಿದ್ದಾರೆ. ಅತಿಥಿಗಳಾಗಿ ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ, ಡಾ.ವೀರಣ್ಣ ರಾಜೂರ ಮತ್ತು ನಿವೃತ್ತ ಲೋಕೋಪಯೋಗಿ ಕಾರ್ಯದರ್ಶಿ ಜಿ.ಸಿ.ತಲ್ಲೂರ ಭಾಗವಹಿಸಲಿದ್ದಾರೆ. ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಡಾ.ಎಂ.ಎಸ್.ಸುಂಕಾಪುರ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.