ನಾಳೆ ರಾಜ್ಯದ ವಿವಿಧ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ

217

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಕ್ತಾಯಗೊಂಡಿರುವ ಅವಧಿ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಮಹಾನಗರ ಪಾಲಿಕೆ, ನಗರ, ಗ್ರಾಮ ಪಂಚಾಯ್ತಿಯ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದ್ದು, ತುರ್ತು ಸೇವೆ ಇಲಾಖೆ ಹೊರತುಪಡಿಸಿ ಎಲ್ಲ ಇಲಾಖೆಗಳಿಗೆ ವೇತನ ಸಹಿತಿ ರಜೆ ಘೋಷಿಸಲಾಗಿದೆ.

ವಿಜಯಪುರ ಮಹಾನಗರ ಪಾಲಿಕೆಯ 35 ವಾರ್ಡ್, 10 ಜಿಲ್ಲೆಯ 28 ವಾರ್ಡ್ ಹಾಗೂ 252 ಗ್ರಾಮ ಪಂಚಾಯ್ತಿಗಳ ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ನಾಳೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ಮತ ಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ, ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳಉ, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ-ಸಂಸ್ಥೆಗಳಲ್ಲಿ, ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರೆ ಎಸ್ಟಬ್ಲಿಷ್ ಮೆಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವವ ಅರ್ಹ ಮತದಾರರಿಗೆ ನೌಕರಿಗೆ ವೇತನ ಸಹಿತ ರಜೆ ಘೋಷಿಸಿ ಆದೇಶಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!