ನಾಳೆ ಸಚಿವರೊಬ್ಬರ ಅಕ್ರಮ ಬಯಲು: ಎಚ್ಡಿಕೆ

153

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ರಾಜ್ಯ ಸರ್ಕಾರದ ಸಚಿವರೊಬ್ಬರ ಅಕ್ರಮವನ್ನು ಗುರುವಾರ ಸದನದೊಳಗೆ ಬಯಲಿಗೆ ಎಳೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬುಧವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ದಾಖಲೆ ಸಮೇತ ನಿಯಮ ಉಲ್ಲಂಘಿಸಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದನ್ನು ಬಯಲಿಗೆ ಎಳೆಯುತ್ತೇನೆ. ನಾನು ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುವುದಿಲ್ಲ. ನಾಳೆಯವರೆಗೂ ಕಾಯಿರಿ. ನನ್ನ ಬಗ್ಗೆ ಏಕವಚನದಲ್ಲಿ ಮಾತನಾಡಿದ ಸಚಿವರಿಗೆ ಇದು ಸಣ್ಣ ನಿರ್ದೇಶನ ಎಂದು ಕುಮಾರಸ್ವಾಮಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!