ಬೀದರನಲ್ಲಿ ನಾಳೆ ಶಾಲಾ, ಕಾಲೇಜು ರಜೆ

470

ಪ್ರಜಾಸ್ತ್ರ ಸುದ್ದಿ

ಬೀದರ್: ಓಮಿಕ್ರಾನ್ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಅದು ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯ ತನಕ ಇರಲಿದೆ. ಹೀಗಾಗಿ ನಾಳೆ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ಈ ಬಗ್ಗೆ ತಿಳಿಸಿದ್ದು, ಖಾಸಗಿ ಶಾಲಾ, ಕಾಲೇಜುಗಳು ಈಗಾಗ್ಲೇ ರಜೆ ಘೋಷಿಸಲಾಗಿದೆ. ಸರ್ಕಾರಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದಿದ್ದಾರೆ. ಇನ್ನು ದೇವಸ್ಥಾನಗಳಲ್ಲಿಯೂ ನಿರ್ಬಂಧ ಹೇರಲಾಗಿದೆ. ಅಲ್ಲಿನ ಸುತ್ತಲಿನ ಅಂಗಡಿಗಳನ್ನು ತೆರೆಯುವುದಕ್ಕೂ ನಿಷೇಧ ಹೇರಲಾಗಿದೆ ಎಂದರು.




Leave a Reply

Your email address will not be published. Required fields are marked *

error: Content is protected !!